ರಜನೀಶ್ ಗೋಯಲ್ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ಶಾಲಿನಿ ಅವರು ಮುಂದಿನ ಮುಖ್ಯ ಕಾರ್ಯದರ್ಶಿ ಆಗಲಿದ್ದಾರೆ ಎಂದು “ಜನಜೀವಾಳ ” ಈ ಹಿಂದೆ ಸಾಕಷ್ಟು ಸಲ ವರದಿ ಮಾಡಿದ್ದನ್ನು ಇಲ್ಲಿ ನೆನಪಿಸಬಹುದಾಗಿದೆ.
ಬೆಂಗಳೂರು: ಆಗಸ್ಟ್ 1 ರಿಂದ ಶಾಲಿನಿ ರಜನೀಶ್ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 1989ರ ಬ್ಯಾಚ್ನ ಐಎಎಸ್ ಅಧಿಕಾರಿ ಆಗಿರುವ ಶಾಲಿನಿ ಅವರ ಸೇವಾವಧಿ 2027ರ ಜೂನ್ 30ರ ವರೆಗೆ ಇರಲಿದ್ದು, ಮೂರು ವರ್ಷಗಳ ಕಾಲ ದೀರ್ಘಾವಧಿ ಸೇವೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ. ಶಾಲಿನಿ ರಜನೀಶ್ ಅವರು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಪಾರ ಹೆಸರು ಗಳಿಸಿದ್ದರು. ನಂತರ ಬೆಂಗಳೂರಿಗೆ ವರ್ಗಾವಣೆಗೊಂಡ ಅವರು ಹಂತ ಹಂತವಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮೇಲಕ್ಕೆರಿದ್ದರು. ಮಾತ್ರವಲ್ಲ ಕಾಂಗ್ರೆಸ್ ,ಬಿಜೆಪಿ, ಜೆಡಿಎಸ್ ಸರಕಾರದ ಅವಧಿಯಲ್ಲಿ ಅತ್ಯಂತ ಸಮನ್ವಯ ಸಾಧಿಸಿ ಉತ್ತಮ ಸ್ನೇಹ ಸಂಬಂಧ ಹೊಂದುವ ಮೂಲಕ ಅತ್ಯಂತ ಕ್ರಿಯಾಶೀಲ ಹಾಗೂ ದಕ್ಷ ಅಧಿಕಾರಿ ಎಂಬ ಕೀರ್ತಿ ಗಳಿಸಿದ್ದರು.
ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ. ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಶಾಲಿನಿ ರಜನೀಶ್ ಅವರು ರಜನೀಶ್ ಗೋಯಲ್ ಅವರ ಪತ್ನಿ ಎಂಬುದು ಗಮನಾರ್ಹ ಸಂಗತಿಯಾಗಿದೆ.
ರಜನೀಶ್ ಗೋಯಲ್ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ರಜನೀಶ್ ಗೋಯಲ್ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರೇಸ್ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಸೇಠ್ ಹಾಗೂ ಶಾಲಿನಿ ರಜನೀಶ್ ಅವರಿದ್ದರು. ಈಗ ರಾಜ್ಯ ಸರ್ಕಾರವು ಶಾಲಿನಿ ರಜನೀಶ್ ಅವರಿಗೇ ಮಣೆ ಹಾಕಿದೆ. 2027ರ ಜೂನ್ಗೆ ಇವರು ನಿವೃತ್ತಿ ಹೊಂದಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್.ಕೆ. ಪಾಟೀಲ್ ಅವರು ಶಾಲಿನಿ ರಜನೀಶ್ ಅವರ ನೇಮಕದ ಕುರಿತು ಮಾಹಿತಿ ನೀಡಿದರು. “ರಜನೀಶ್ ಗೋಯಲ್ ಅವರ ಅಧಿಕಾರದ ಅವಧಿ ಮುಗಿದ ಕಾರಣ ಅವರನ್ನು ಬೀಳ್ಕೊಡಲಾಗುತ್ತದೆ. ಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ” ಎಂಬುದಾಗಿ ಅವರು ತಿಳಿಸಿದರು.
ಅಜಯ್ ಸೇಠ್ ಅವರು ಇನ್ನು 11 ತಿಂಗಳು ಮಾತ್ರ ಅಧಿಕಾರದಲ್ಲಿ ಇರುವುದರಿಂದ ರಾಜ್ಯ ಸರ್ಕಾರವು ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿದೆ ಎಂದು ತಿಳಿದುಬಂದಿದೆ. ಅಭಿವೃದ್ಧಿ ಆಯುಕ್ತರಾಗಿ ಶಾಲಿನಿ ರಜನೀಶ್ ಅವರ ಕಾರ್ಯವೈಖರಿಯು ರಾಜ್ಯ ಸರ್ಕಾರಕ್ಕೆ ಇಷ್ಟವಾಗಿದೆ. ಇದೇ ಕಾರಣಕ್ಕಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ದ್ವಿತೀಯ ದಂಪತಿ ಎಂಬ ಖ್ಯಾತಿಗೆ ಶಾಲಿನಿ ರಜನೀಶ್ ಹಾಗೂ ರಜನೀಶ್ ಗೋಯಲ್ ಪಾತ್ರರಾದರು. ಇದಕ್ಕೂ ಮೊದಲು ಬಿ.ಕೆ.ಭಟ್ಟಾಚಾರ್ಯ ಹಾಗೂ ತೆರೇಸಾ ಭಟ್ಟಾಚಾರ್ಯ ದಂಪತಿಯು ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿದ್ದರು. ಶಾಲಿನಿ ಅವರು ಮುಂದಿನ ಮುಖ್ಯ ಕಾರ್ಯದರ್ಶಿ ಆಗಲಿದ್ದಾರೆ ಎಂದು “ಜನಜೀವಾಳ” ಈ ಹಿಂದೆ ಸಾಕಷ್ಟು ಸಲ ವರದಿ ಮಾಡಿದ್ದನ್ನು ಇಲ್ಲಿ ನೆನಪಿಸಬಹುದಾಗಿದೆ.