ಬೆಳಗಾವಿ :
ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಶ್ರೀರಾಮಚಂದ್ರ, ಲಕ್ಷ್ಮಣ, ಸೀತೆ, ಶ್ರೀ ಹನುಮಾನ ದೇವತೆಗಳ ಪೋಟೊಗಳನ್ನು ಬಳಸಿ ಎಲೆಕ್ಟ್ರಾನಿಕ್ ಉಪಕರಣಗಳಿಂದ ಅಶ್ಲೀಲವಾಗಿ ಮಾರ್ಪಡಿಸಿ ಹಿಂದೂ ದೇವತೆಗಳಿಗೆ ಅವಮಾನವಾಗುವ ರೀತಿಯಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಪ್ರಸಾರವಾಗುವಂತೆ ಮಾಡಿ ದೇವತೆಗಳ ಆರಾಧಕರಿಗೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗುವಂತೆ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಕೊನೆಗೂ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಶಹಾಪುರ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸಿಇಎನ್ ಹಾಗೂ ತಂಡದವರು ವೈಜ್ಞಾನಿಕ ರೀತಿಯಿಂದ ತನಿಖೆಯನ್ನು ಕೈಗೊಂಡು ಆರೋಪಿಯನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.