ಬೆಳಗಾವಿ :ಇದೊಂದು ವಿಚಿತ್ರ ಘಟನೆ. ಪತ್ನಿ ಕಾಟ ತಾಳಲಾರದೆ 26 ಲಕ್ಷ ನಗದು ತೆಗೆದುಕೊಂಡು ಮುಂಬೈನಿಂದ ಗೋವಾಕ್ಕೆ ಕಾರಲ್ಲಿ ಹೊರಟಿದ್ದ ಗುತ್ತಿಗೆದಾರ ಬೆಳಗಾವಿಯಲ್ಲಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಬೆಳಗಾವಿಯ ಕರ್ನಾಟಕ ಚೌಕ್ ಬಳಿಯ ಚೆಕ್ ಪೋಸ್ಟ್ ನಲ್ಲಿ 26 ಲಕ್ಷ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಗೂಗಲ್ ಮ್ಯಾಪ್ ಗಮನಿಸಿ ಗೋವಾ ಹೋಗಲು ಪ್ಲಾನ್ ಮಾಡಿಕೊಂಡಿದ್ದ ಗುತ್ತಿಗೆದಾರನಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿರುವ ಗುತ್ತಿಗೆದಾರ ತಾನು ಒಯ್ಯುತ್ತಿದ್ದ ಹಣಕ್ಕೆ ದಾಖಲೆ ಇದೆ. ತಾನು ಮುಂಬೈಯಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ ಎಂದು ಸ್ಪಷ್ಟಪಡಿಸಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸರು ಇಷ್ಟು ದೊಡ್ಡ ಮೊತ್ತದ ಹಣ ಒಯ್ಯುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಆತ ಪತ್ನಿ ಕಾಟ ತಾಳಲಾರದೆ ನೆಮ್ಮದಿಗಾಗಿ ಗೋವಾಕ್ಕೆ ತೆರಳುತ್ತಿದ್ದೇನೆ. ಆನ್ಲೈನ್ ಪೇಮೆಂಟ್ ಮಾಡಿದರೆ ಬ್ಯಾಂಕ್ ಟ್ರಾನ್ಸಾಕ್ಷನ್ಸ್ ಮೂಲಕ ಗೊತ್ತಾಗುತ್ತದೆ. ಹಣದ ಮೂಲದ ಬಗ್ಗೆ ಪೊಲೀಸರು ಹಾಗೂ ಆದಾಯ ತೆರಿಗೆ ಇಲಾಖೆಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದು ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.