ಪುತ್ತೂರು: ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವಂತೆ ಶಾಸಕ ಅಶೋಕ್ ರೈ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ. ಸಲೀಂ ಅಹಮದ್ ರವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.
ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿಯಾದ ಶಾಸಕರು ಎಸ್ಪಿ ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ವರ್ಗಾಯಿಸುವಂತೆ ಈ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು, ಈ ಬೆಳವಣಿಗೆ ಪರಿಶೀಲನೆ ಹಂತದಲ್ಲಿದೆ. ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಗುಪ್ತಚರ ಇಲಾಖೆ ಕಚೇರಿಯನ್ನು ಪುತ್ತೂರಿಗೆ ವರ್ಗಾವಣೆ ಮಾಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ. ಜೊತೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಈಗ ಇರುವ ಹಳೆಯ ಠಾಣಾ ಕಟ್ಟಡವನ್ನು ಶಿಫ್ಟ್ ಮಾಡಲು ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದರು.