ಬೆಳಗಾವಿ:
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿಯನ್ನು ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರಿಗೆ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 2 ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಗಾಂಧೀಭವನದಲ್ಲಿ ಗುರುವಾರದಂದು ಸಂಜೆ 5:30 ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲಕುಮಾರ ಪ್ರಶಸ್ತಿ ಪುರಸ್ಕೃತರ ಪರಿಚಯ ಕೈಪಿಡಿ
ಬಿಡುಗಡೆ ಮಾಡಲಿದ್ದು ಮುಖ್ಯ ಅತಿಥಿಗಳಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ
ಕಂಬಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.
ಮಂಜುಳಾ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಮತಕ್ಷೇತ್ರದ ಶಾಸಕ ರಿಜ್ವಾನ್ ಆರ್ಷದ್ ವಹಿಸಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಂಕರ ಬಾಗೇವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.