ಬೆಳಗಾವಿ: ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಅಶೋಕ ತೇಲಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಅಶೋಕ ತೇಲಿ ಅವರು ಈ ಮೊದಲು ಬೆಳಗಾವಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ತಮ್ಮ ಅವಧಿಯಲ್ಲಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಗತ್ಯ ಸಹಾಯ ಹಸ್ತ ಮೂಲಕ ಇತರ ಅಧಿಕಾರಿಗಳಿಗೆ ಮಾದರಿಯಾಗಿದ್ದರು. ಅತ್ಯಂತ ಕ್ರಿಯಾಶೀಲ ಹಾಗೂ ಜನಾನುರಾಗಿ ಅಧಿಕಾರಿಯಾಗಿದ್ದರು. ಅವರ ಸೇವೆ ಗಮನಿಸಿ ರಾಜ್ಯ ಸರ್ಕಾರ ಈಗ ಮಹತ್ವದ ಹುದ್ದೆಗೆ ನೇಮಕ ಮಾಡಿದೆ.
ಕ್ರಿಯಾಶೀಲ, ಜನಾನುರಾಗಿ ಅಧಿಕಾರಿಗೆ ಮತ್ತೆ ಸಿಕ್ತು ಬಡ್ತಿ; ಅಶೋಕ ತೇಲಿ ಈಗ ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರು
