ರಾಂಚಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅವರಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ 302 ರನ್ಗಳಿಗೆ ಏಳು ವಿಕೆಟ್ ಕಳೆದುಕೊಂಡಿದೆ.
ಜೋ ರೂಟ್ ಆಕರ್ಷಕ 107 ರನ್ ಗಳಿಸಿದರು. ಇಂಗ್ಲೆಂಡ್ ಪರ ಅತಿ ಹೆಚ್ಚು ಬಾರಿ ಅರ್ಧ ಶತಕ ಬಾರಿಸಿದ ಅಲೆಸ್ಟರ್ ಕುಕ್ ದಾಖಲೆಯನ್ನು ಜೋ ರೂಟ್ ಮುರಿದಿದ್ದಾರೆ. ನಾಲ್ಕನೇ ಕ್ರಮಾಂಕದ ಬ್ಯಾಟರ್ ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ 91 ನೇ 50 ಪ್ಲಸ್ ಸ್ಕೋರ್ ಪೂರ್ಣಗೊಳಿಸಿದರು. ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ 90 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿರುವ ಅಲೆಸ್ಟರ್ ಕುಕ್ ಎರಡನೇ ಸ್ಥಾನದಲ್ಲಿದ್ದಾರೆ.
ಭಾರತದ ವಿರುದ್ಧ ದಾಖಲೆ ಸೃಷ್ಟಿಸಿದ ರೂಟ್ :
ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ ಜೋ ರೂಟ್ ದಾಖಲೆ ಸೃಷ್ಟಿಸಿದ್ದಾರೆ. ಟೆಸ್ಟ್ ಇತಿಹಾಸದಲ್ಲಿ ಭಾರತದ ವಿರುದ್ಧ 10 ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ. 52 ಇನ್ನಿಂಗ್ಸ್ ಗಳಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಸ್ಟೀವ್ ಸ್ಮಿತ್ 9 ಶತಕ, ಗ್ಯಾರಿ ಸೋಬರ್ಸ್, ವಿವ್ ರಿಚರ್ಡ್ಸ್, ರಿಕಿ ಪಾಂಟಿಂಗ್ ತಲಾ 8 ಶತಕಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ರೂಟ್ 105(223) ಗಳಿಸಿ ಕ್ರೀಸ್ ನಲ್ಲಿದ್ದಾರೆ.
ಆರ್.ಅಶ್ವಿನ್ ಅವರು ಇಂಗ್ಲೆಂಡ್ ವಿರುದ್ಧ 100 ವಿಕೆಟ್ ಪಡೆದ ವಿಶೇಷ ಸಾಧನೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಟೆಸ್ಟ್ ಕ್ಯಾಪ್ ಧರಿಸಿದ ಆಕಾಶ ದೀಪ್ ಮಹತ್ವದ ಮೂರು ವಿಕೆಟ್ ಕಬಳಿಸಿ ಆಘಾತ ನೀಡಿದರು.