ಬೆಳಗಾವಿ :
ಬೆಳಗಾವಿಗೆ ಇಂದು ಸಂಜೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಆಗಮಿಸಲಿದ್ದಾರೆ.
ಮಧ್ಯಾಹ್ನ 3:30ಕ್ಕೆ ಗುವಾಹತಿ ವಿಮಾನ ನಿಲ್ದಾಣದಿಂದ ತೆರಳುವ ಅವರು ಸಂಜೆ 6.30 ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವರುಮ ನಂತರ ನಗರದ ಶಹಾಪುರ ಕಪಿಲೇಶ್ವರ ಕಾಲೋನಿಯ ಛತ್ರಪತಿ ಶಿವಾಜಿ ಮಹಾರಾಜರ ಉದ್ಯಾನದಲ್ಲಿ ಶಿವಾಜಿ ಮಹಾರಾಜರ ಕುರಿತ ಶಿವ ಚರಿತೆ ಲೋಕಾರ್ಪಣೆಗೊಳಿಸುವರು. 8.20 ಕ್ಕೆ ಬೆಳಗಾವಿ ವಿಮಾನ ನಿಲ್ದಾಣದಿಂದ ತೆರಳುವ ಅವರು ರಾತ್ರಿ 11:30 ಕ್ಕೆ ಗುವಾಹತಿ ತಲುಪಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಇತರರು ಭಾಗಿ :
ಛತ್ರಪತಿ ಶಿವಾಜಿ ಮಹಾರಾಜರ ಜೀವನ ಸಂದೇಶ ಕುರಿತ ಶಿವ ಚರಿತೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿರಾವ್ ಮುಳೆ, ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ ಸೇರಿದಂತೆ ಗಣ್ಯರು ಉಪಸ್ಥಿತರಿರುವರು.