ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇದೀಗ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಯಾವುದೇ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಚುನಾವಣೆಗೆ ಎಲ್ಲಾ ತಯಾರಿಗಳು ನಡೆಯುತ್ತಿವೆ. ರಾಜ್ಯ ಚುನಾವಣಾ ಮುಖ್ಯ ಆಯುಕ್ತರು, ಎಲ್ಲಾ ಜಿಲ್ಲಾ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಚುನಾವಣಾ ತಯಾರಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಸಮಯದಲ್ಲಾದರೂ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಂದ ಅದಕ್ಕೆ ಬೇಕಾಗಿರುವ ಅಗತ್ಯ ತಯಾರಿ ಹಾಗೂ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಆಯೋಗ ಸೂಚಿಸಿದೆ. ಬಹುತೇಕ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದರಲ್ಲೂ ಈ ಬಾರಿ ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ಕರ್ನಾಟಕದಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.