ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಶನಿವಾರ
ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಯ ಪರೀಕ್ಷೆಗೆ ಶೇ.98.2ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಏ.15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.