ಬೆಳಗಾವಿ :
ಅಭಿಯೋಗ ಮತ್ತು ಬೆಳಗಾವಿ ಸರ್ಕಾರಿ ವ್ಯಾಜ್ಯಗಳ ಇಲಾಖೆಗೆ ಜಿಲ್ಲೆಯಲ್ಲಿ ಒಟ್ಟು 24 ಸಹಾಯಕ ಸರ್ಕಾರಿ ಅಭಿಯೋಜಕರು-ವ, ಸಹಾಯಕ ಸರ್ಕಾರಿ ವಕೀಲರ ಖಾಲಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಹಾಯಕ ಸರ್ಕಾರಿ ಅಭಿಯೋಜಕರ (ನೇಮಕಾತಿ ನಿಯಮ)ಗಳು 2012 ರಲ್ಲಿ ನಿಗದಿ ಪಡಿಸಲಾಗಿರುವಂತಹ ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು.
ಆಯ್ಕೆಯ ವಿಧಾನ: ಅಭ್ಯರ್ಥಿಗಳು ಎಲ್.ಎಲ್.ಬಿ. ಪದವಿಯಲ್ಲಿ ಪಡೆದ ಅಂಕಗಳು ಹಾಗೂ ವೃತ್ತಿಯಲ್ಲಿ ಹೊಂದಿದ ಅನುಭವದ ಆಧಾರದ ಮೇಲೆ ಆಯ್ಕೆ ಕ್ರಮ ಕೈಕೊಳ್ಳಲಾಗುವುದು ಮತ್ತು ಸಂದರ್ಶನ ಇರುವುದಿಲ್ಲ.
ಅರ್ಹ ಅಭ್ಯರ್ಥಿಗಳು ಆಗಸ್ಟ್ 20, 2023 ರೊಳಗಾಗಿ
ಜಿಲ್ಲಾಧಿಕಾರಿಗಳ ಆಪ್ತ ಶಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಳಗಾವಿ-590001 ಇಲ್ಲಿಗೆ ಆರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.