ಶಿರಗಾಂವ್ : ಶುಕ್ರವಾರ ತಡರಾತ್ರಿ ಗೋವಾದ ಶಿರ್ಗಾವ್ನಲ್ಲಿ ನಡೆದ ಶ್ರೀ ಲೈರೈ ಜಾತ್ರಾ ವೇಳೆ ಕಾಲ್ತುಳಿತ ಸಂಭವಿಸಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಮಾಪುಸಾದ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆಯ ನಂತರ ಗೋವಾ ಸಿಎಂ ಪ್ರಮೋದ್ ಸಾವಂತ್ ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.