ಅಥಣಿ :
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ (ರಿ) ಅಥಣಿ ತಾಲೂಕು ಘಟಕದ ವತಿಯಿಂದ ಪಟ್ಟಣದ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಮಾಜಿ ಉಪಮುಖ್ಯಮಂತ್ರಿ, ಅಥಣಿ *ಶಾಸಕ ಲಕ್ಷ್ಮಣ ಸವದಿ ಹಾಗೂ ಕಾಗವಾಡ ಶಾಸಕ ರಾಜು (ಭರಮಗೌಡ) ಕಾಗೆ ಅವರಿಗೆ ಸನ್ಮಾನ ಸಮಾರಂಭ ಜರುಗಿತು.
ಲಕ್ಷ್ಮಣ ಸವದಿ ಮಾತನಾಡಿ, ಬಣಜಿಗ ಸಮಾಜ ಬಾಂಧವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಹಾಗೂ ರಾಜು ಕಾಗೆಯವರನ್ನು ಬೆಂಬಲಿಸಿ ಹೆಚ್ಚು ಮತಗಳ ಅಂತರದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ನಮ್ಮ ಮೇಲಿನ ಪ್ರೀತಿ, ಅಭಿಮಾನದಿಂದ ಸನ್ಮಾನಿಸಿ ಗೌರವಿಸಿದ್ದಾರೆ. ನಿಮ್ಮೆಲ್ಲರ ಬೆಂಬಲ, ಸಹಕಾರ, ಪ್ರೋತ್ಸಾಹಕ್ಕೆ ನಾನು ಋಣಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು. ಸಮಾಜ ಬಾಂಧವರ ವಿವಿಧ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಅಥಣಿ ಮತಕ್ಷೇತ್ರದ ರೈತರು, ಹಿಂದುಳಿದವರು, ಬಡವರು, ಜನ ಸೇವೆಗಾಗಿ ಸದಾ ಸಿದ್ಧನಿದ್ದೇನೆ ಎಂದು ಹೇಳಿದರು.
ಶಾಸಕ ರಾಜು ಕಾಗೆ, ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿದರು.
ಅಥಣಿ ಶೆಟ್ಟರಮಠದ ಶ್ರೀ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಣಜಿಗ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸಂಗಪ್ಪ ಉಣ್ಣಿ, ಡಾ. ಎಂ.ಜಿ. ಹಂಜಿ, ಎ.ಎಮ್. ನಿಡೋಣಿ, ಶಿವಯೋಗಿ ಗೆಜ್ಜಿ, ಶಿವಶಂಕರ ಹಂಜಿ, ಮಲ್ಲಿಕಾರ್ಜುನ ಕನಶೆಟ್ಟಿ, ಪುರಸಭೆ ಸದಸ್ಯರಾದ ಸಂತೋಷ ಸಾವಡಕರ, ಉದಯಕುಮಾರ ಸೋಳಸಿ, ಅಕ್ಷಯ ಬುರ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.