ಅಥಣಿಯಲ್ಲಿ ನಿನ್ನೆ 2 ಸಭೆಗಳು ಇದ್ದವು. ಆದ್ದರಿಂದ ನಾನು ಬೆಳಗಾವಿಗೆ ತಡವಾಗಿ ಬಂದೆ ಹೊರತು ಯಾವುದೇ ಭಿನ್ನಮತ ನಮ್ಮಲ್ಲಿ ಇಲ್ಲ. ಬೆಳಗಾವಿಗೆ ಬಂದವನೇ ಅರುಣ್ ಸಿಂಗ್ ಅವರನ್ನು ಭೇಟಿಯಾದೆ ಎಂದು ಅವರು ತುಸು ಖಾರವಾಗಿಯೇ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ತುಸು ಖಾರವಾಗಿಯೇ ಉತ್ತರ ನೀಡಿದರು.
ಬೆಳಗಾವಿ :
ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಮಹತ್ವದ ಚರ್ಚೆ ನಡೆಸಿದ್ದಾರೆ.
ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ
ಲಕ್ಷ್ಮಣ ಸವದಿ ಅವರು ನಿಭಾಯಿಸಬೇಕಾಗಿರುವ ಮಹತ್ವದ ಪಾತ್ರಗಳ ಬಗ್ಗೆ ಅರುಣ್ ಸಿಂಗ್ ಅವರು ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ.
ಬಿಜೆಪಿಯಲ್ಲಿ ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರಂತೆ ಇದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆಗೆ ಹೋಗುತ್ತೇವೆ ಎಂದು ಲಕ್ಷ್ಮಣ ಸವದಿ ಅವರು ಇಂದು ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನಾವೆಲ್ಲ ಒಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದ ಅವರು, ಈಗಾಗಲೇ ನಾವು ಐದು ಕ್ಷೇತ್ರಗಳ ಆಯ್ಕೆ ಮಾಡಿ ಆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತಿದ್ದೇವೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ತೆಕ್ಕೆಯಲ್ಲಿರುವ ಮತ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಸಂಕಲ್ಪಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿರುವ 5 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಮುಖ್ಯ ಗುರಿಯಾಗಿದೆ. ಒಬ್ಬಬ್ಬ ಕಾರ್ಯಕರ್ತರಿಗೆ ಇಪ್ಪತ್ತೈದು ಮತಗಳ ಜವಾಬ್ದಾರಿ ನೀಡಲಾಗಿದೆ. ಬೆಳಗಾವಿ ಗ್ರಾಮೀಣ, ಖಾನಾಪುರ, ಯಮಕನಮರಡಿ, ಚಿಕ್ಕೋಡಿ, ಬೈಲಹೊಂಗಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಅಹರ್ನಿಶಿ ಶ್ರಮಿಸಲಾಗುವುದು. ಈ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತ ಮರುಕಳಿಸುವಂತಾಗಲು ಬೆಳಗಾವಿ ಜಿಲ್ಲೆಯ ಕೊಡುಗೆ ನೀಡಲಾಗುವುದು ಎಂದು ತಿಳಿಸಿದರು.