ಬೆಳಗಾವಿ :
ಬೆಳಗಾವಿ ಮಜಗಾಂವದಲ್ಲಿ ಅಕ್ರಮ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಅಧಿಕಾರಿಗಳು ಒಟ್ಟು 13 ಕೇಸ್ಗಳನ್ನು ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಡಾ. ಬಿ.ಎನ್. ತುಕ್ಕಾರ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಡಾ. ಶ್ವೇತಾ ಪಾಟೀಲ ಜಿಲ್ಲಾ ಸಲಹೆಗಾರರು, ಕವಿತಾ ರಾಜನ್ನವರ ಸಮಾಜ ಕಾರ್ಯಕರ್ತೆ, ಪೊಲೀಸ್ ಇಲಾಖೆಯ ಜೆ,ಎಸ್ ಮುಲ್ಲಾ ಪೊಲೀಸ ಸಿಬ್ಬಂದಿಗಳು ಭಾಗವಹಿಸಿದ್ದರು.