ದೆಹಲಿ:
ಕರ್ನಾಟಕ ಸೇರಿದಂತೆ 6 ರಾಜ್ಯಗಳ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ವಲಯ ಘೋಷಿಸುವ ಸಂಬಂಧ ನೂತನವಾಗಿ ರಚಿಸಲಾಗಿರುವ ಸಮಿತಿಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
ಮಾಧವ್ ಗಾಡಗೀಳ ಮತ್ತು ಕಸ್ತೂರಿ ರಂಗನ್ ಸಮಿತಿ ಸಲ್ಲಿಸಿದ ವರದಿಗೆ ಕೆಲ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊಸ ಸಮಿತಿ ರಚಿಸಲಾಗಿತ್ತು. ಸಮಿತಿ ಈ ವೇಳೆಗಾಗಲೇ ವರದಿ ಸಲ್ಲಿಸಬೇಕಿತ್ತು. ಆದರೆ, ಅದು ಸಮಯ ವಿಸ್ತರಣೆ ಕೇಳಿದ ಹಿನ್ನೆಲೆಯಲ್ಲಿ ವರದಿ ವಿಳಂಬವಾಗಿದೆ ಎಂದು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.