ಬೆಳಗಾವಿ :
ಕೆಎಲ್ ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜು ಬೆಳಗಾವಿಯ ರೋಟರಿ ಕ್ಲಬ್ ಸೌತ್ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೇಳೆ ನೈರ್ಮಲ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಿತ್ತು. ಡಾ.ಅನಿತಾ ಉಮದಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಏಕೆ ಮತ್ತು ಎಷ್ಟು ಮುಖ್ಯ, ಸ್ಯಾನಿಟರಿ ಪ್ಯಾಡ್ಗಳ ಬಳಕೆ, ಅದರ ವಿಲೇವಾರಿ, ಗರ್ಭಕಂಠದ ಲಸಿಕೆ ಮತ್ತು ಇತರ ಹಲವು ಪ್ರಮುಖ ವಿಷಯಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಿದರು.
ಪ್ರಾಚಾರ್ಯ ಡಾ.ಬಿ.ಜಯಸಿಂಹ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು. ತೇಜಸ್ವಿನಿ ಖೇಮಾಜಿ ನಿರೂಪಿಸಿದರು. ಡಾ.ಅಶ್ವಿನಿ ಬಿ.ಹಿರೇಮಠ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಮಹಿಳಾ ಸಿಬ್ಬಂದಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.