ಬೆಳಗಾವಿ :
೨೦೨೨-೨೩ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮಕ್ಕೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜು.೬ ೨೦೨೩ ರಿಂದ ಜು.೧೫ ೨೦೨೩ ರವರೆಗೆ ಅರ್ಜಿ ಅವಧಿ ವಿಸ್ತರಿಸಲಾಗಿದೆ.
ಆನ್ಲೈನ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಸಂಪರ್ಕಿಸಿ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ, ಇಲಾಖಾ ಸಹಾಯವಾಣಿ: ಸಂಖ್ಯೆ ೮೦೫೦೭೭೦೦೦೫ ಸಂರ್ಪಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಜ್ಯ ವಿದ್ಯಾರ್ಥಿವೇತನದ ಸಹಾಯವಾಣಿ ೦೮೦-೩೫೨೫೪೭೫೭ ಸಂರ್ಪಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.