ಬೆಂಗಳೂರು :
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವುದಾಗಿ ಪ್ರಸ್ತಾಪಿಸಲಾಗಿದೆ.
ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಈ ಅಂಶಗಳನ್ನು ಸೇರಿಸಲಾಗಿದೆ.
ನ್ಯಾಯಪೀಠದೆದುರು ಎಲ್ಲರೂ ಸಮಾನರೇ. ಕರ್ನಾಟಕ ಮಾಹಿತಿದಾರರ ಸಂರಕ್ಷಣಾ ಕಾಯ್ದೆ ಜಾರಿ, ಕುಟುಂಬದ ರಕ್ತಸಂಬಂಧಿಗಳೊಳಗೆ ಉಡುಗೊರೆ / ದಾನ / ವಿಲ್ ರೂಪದ ಭೂ ವರ್ಗಾವಣೆಗೆ ನೋಂದಣಿ ಶುಲ್ಕದಲ್ಲಿ ಕಡಿತ, ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಭಿತ್ತಿ ವಿಭಜನೆಗೆ ಕಾರಣವಾಗುವ , ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ .
ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂಬ ವಿಷಯ ಪ್ರಸ್ತಾಪ ಮಾಡಲಾಗಿದೆ.