ಬೆಂಗಳೂರು : ರಾಜ್ಯ ಸರ್ಕಾರವು ಶಾಲಾ-ಕಾಲೇಜುಗಳ ಬಳಿ ಮದ್ಯದಂಗಡಿಗಳನ್ನು ತೆರೆಯುವುದನ್ನು ನಿಷೇಧಿಸಿದೆ. ಒಂದು ವೇಳೆ ಯಾರಾದರೂ ತೆರೆದರೆ, ಶೈಕ್ಷಣಿಕ ಸಂಸ್ಥೆಗಳು ಅಬಕಾರಿ ಇಲಾಖೆಗೆ ದೂರು ನೀಡುವಂತೆ ಸೂಚಿಸಲಾಗಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲಾ ಉಪ ನಿರ್ದೇಶಕರಿಗೂ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಯ ಆಯುಕ್ತರು ಸರ್ಕಾರಕ್ಕೆ ಬರೆದ ಪತ್ರದಲ್ಲಿ, ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆಂದು ತಿಳಿಸಿದ್ದಾರೆ.