ಬೆಳಗಾವಿ :ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನಪ್ರಿಯ ಪೊಲೀಸ್ ಅಧಿಕಾರಿಗಳಿಗೆ ಇನ್ನಷ್ಟು ಬಡ್ತಿ ಸಿಕ್ಕಿದೆ.
ಬೆಳಗಾವಿಯ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿರುವ ನಗರದ ಮಾರ್ಕೆಟ್ ಡಿವೈಎಸ್ ಪಿ ನಾರಾಯಣ ಬರಮನಿ ಅವರನ್ನು ಧಾರವಾಡ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ, ಬೆಳಗಾವಿ ಉತ್ತರ ವಲಯ ಐಜಿಪಿ ಕಚೇರಿಯ ಡಿವೈ ಎಸ್ ಪಿ ಮಹಾಂತೇಶ್ವರ ಜಿದ್ದಿ ಅವರನ್ನು ಬಾಗಲಕೋಟೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಮತ್ತು ರಾಮದುರ್ಗ ಉಪವಿಭಾಗ ಡಿವೈಎಸ್ ಪಿ ರಾಮನಗೌಡ ಹಟ್ಟಿ ಅವರನ್ನು ವಿಜಯಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.