ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 17 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಅದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಅಕ್ಟೋಬರ್ 16 ರಿಂದ ಮುಂದಿನ 3 ದಿನಗಳ ವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಅಕ್ಟೋಬರ್ 17 – 18 ಭಾರಿ ಮಳೆ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಅಕ್ಟೋಬರ್ 16ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿಯೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.