ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಈ ಮಧ್ಯೆ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದ್ದು ಬಸವರಾಜ್ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಬಸವರಾಜ್ ಹೊರಟ್ಟಿ ಅವರು ತಮ್ಮ ರಾಜಿನಾಮೆ ಪತ್ರವನ್ನು ರವಾನಿಸಿದ್ದು ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹೀಗಾಗಿ ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಇಂದು ಬೆಳಗ್ಗೆ ಅಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ರಾಜೀನಾಮೆ ಪತ್ರವನ್ನು ಉಪಸಭಾಪತಿಗೆ ರವಾನಿಸಿದ್ದಾರೆ.