ಬೆಳಗಾವಿ :
ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ತಿರುಮಲ ನಾಯ್ಕ ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ಬೆಂಗಳೂರಿನ ವಿಕಾಸಸೌಧದಲ್ಲಿ ಮಂತ್ರ ಫೌಂಡೇಶನ್ ಹಾಗೂ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ನಾಗರಿಕ ಯುವ ಸಂಸತ್ತು ಎಂಬ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಅವರು ತೃತೀಯ ಸ್ಥಾನ ಪಡೆದು ಬೆಲ್ಲದ ಕಾನೂನು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ತಮ್ಮ ಅತ್ಯುತ್ತಮ ವಾಕ್ಚಾತುರ್ಯದ ಮೂಲಕ ಅವರು ಸಭಿಕರ ಮನೆಗೆದ್ದಿದ್ದರು.
ಸುಮಾರು 210 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.