ಬೆಳಗಾವಿ : ಬೆಳಗಾವಿ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಸುತ್ತಮುತ್ತಲಿನ ಎಲ್ಲಾ ಹೆದ್ದಾರಿಗಳು ರದ್ದಾಗಿರುತ್ತವೆ. ಬೆಳಗಾವಿಯ ಪರೀಕ್ಷಾ ಕೇಂದ್ರ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜು, (ರಾಣಿ ಚನ್ನಮ್ಮವಿಶ್ವವಿದ್ಯಾಲಯ ಅಧೀನ ಸಂಸ್ಥೆ) ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯದಿಂದ ದಿನಾಂಕ:27-07-2024 ಹಾಗೂ 28-07-2024 ರಂದು ಆಯೋಜಿಸಲಾಗಿದ್ದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಳಗಾವಿ: ಶನಿವಾರ, ರವಿವಾರ ನಡೆಯಬೇಕಿದ್ದ ಡಾ.ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ
