ಬೆಳಗಾವಿ ಕೋರ್ಟ್ ನಲ್ಲಿ ಇಂದು ನಗರದ ಹಿಂಡಲಗಾ ಜೈಲಿನಲ್ಲಿದ್ದ ಕೈದಿ ಜಯೇಶ್ ಪೂಜಾರಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಈ ಸಂದರ್ಭದಲ್ಲಿ ವಕೀಲರು ಹಾಗೂ ಕೋರ್ಟಿನಲ್ಲಿದ್ದ ಸಾರ್ವಜನಿಕರು ಘೋಷಣೆ ಕೂಗಿದ ಆರೋಪಿಗೆ ಧರ್ಮದೇಟು ನೀಡಿದ ಘಟನೆ ನಡೆದಿದೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಜೀವ ಬೆದರಿಕೆ ಹಾಕಿದ್ದ ಜಯೇಶ್ ಪೂಜಾರಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವನು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಏಕಾಏಕಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.
ಬೆಳಗಾವಿ : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿಂದು ನಟೋರಿಯಸ್ ಕ್ರಿಮಿನಲ್ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಇದರಿಂದ ಕೋಪಗೊಂಡ ಸ್ಥಳದಲ್ಲಿದ್ದವರು ಧರ್ಮದೇಟು ನೀಡಿದ್ದಾರೆ.
ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಆರೋಪಿಯನ್ನು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಆಗ ಆತ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ.
ನಟೋರಿಯಸ್ ಪಾತಕಿ ಜಯೇಶ್ ಪೂಜಾರಿಯಿಂದ ಪಾಕಿಸ್ತಾನ ಪರ ಘೋಷಣೆ ಕೂಗಿವ. ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟಿನಲ್ಲಿ ಆತನಿಗೆ ಪೆಟ್ಟು ಬಿದ್ದಿದೆ. ತಕ್ಷಣ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು, ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಜಯೇಶ್ ಪೂಜಾರಿ ಈ ಹಿಂದೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿದ್ದುಕೊಂಡೆ ಜೀವ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಪಾಕ್ ಪರ ಘೋಷಣೆ ಕೂಗಿರುವುದಾಗಿ ಆತ ಹೇಳಿದ್ದಾನೆ.