ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆಯ ೨೧ ನೇ ಅವಧಿಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಚುನಾಯಿಸಲು ಜುಲೈ.೧ ೨೦೨೩ ರಂದು ಬೆಳಗಾವಿ ಮಹಾನಗರ ಪಾಲಿಕೆಯ ಸಭಾಗೃಹದಲ್ಲಿ ಚುನಾವಣೆಯನ್ನು ನಡೆಸಲಾಗುವುದು.
ಚುನಾವಣೆ ವೇಳಾಪಟ್ಟಿ :
ಜುಲೈ.೧ ೨೦೨೩ ರಂದು ಬೆಳಗ್ಗೆ ೧೦ ರಿಂದ ೧೨ ಗಂಟೆಯವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರಗಳ ಸ್ವೀಕೃತಿ.
ಮಧ್ಯಾಹ್ನ ೩ ಗಂಟೆಗೆ ಸಭೆ ಹಾಗೂ ಮೂರು ಗಂಟೆಯ ನಂತರ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ : ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಜು.1 ರಂದು
