This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕಂತೆ ! Belagavi should be made a Union Territory!


 

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆನ್ನುವ ಮಹಾರಾಷ್ಟ್ರಗರ ವಿತಂಡ ವಾದ ಇಂದು ನಿನ್ನೆಯ ಬೇಡಿಕೆಯಲ್ಲ. ಬಹು ಹಿಂದೆಯೇ ಇಂತಹ ವಿಷಯವನ್ನು ಪ್ರಸ್ತಾಪಿಸುತ್ತ ಬಂದಿದ್ದಾರೆ. ಆದರೆ, ಕರ್ನಾಟಕ ಸರಕಾರ ಹಾಗೂ ಕನ್ನಡ ಹೋರಾಟಗಾರರು ಇದಕ್ಕೆ ಕಾಲಕಾಲಕ್ಕೆ ತಕ್ಕ ತಿರುಗೇಟು ನೀಡಿದ್ದಾರೆ. ಅನೇಕ ಹೋರಾಟಗಾರರು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡುವುದಲ್ಲ. ಬದಲಿಗೆ ಬಹುಭಾಷಿಕ ಹಾಗೂ
ಬಹು ಸಂಸ್ಕೃತಿಯ ಜನರಿರುವ ಮುಂಬೈಯನ್ನು ಮೊದಲು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಮರಾಠಿಗರಿಗೆ ತಿರುಗೇಟು ನೀಡಿ ಬಾಯಿ ಮುಚ್ಚಿಸಿದ್ದರು.

ಮುಂಬೈ :
ಶಿವಸೇನೆಯ ಉದ್ದವ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಮತ್ತೆ ಕರ್ನಾಟಕದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಪಾಲಿಗೆ ಎಂದೋ ಮುಗಿದು ಹೋಗಿರುವ ಗಡಿ ವಿವಾದವನ್ನು ಮತ್ತೆ ಕೆಣಕುವ ಮೂಲಕ ಇಲ್ಲಿನ ಮರಾಠಿಗರನ್ನು ಪ್ರಚೋದಿಸಲು ಮುಂದಾಗಿದ್ದಾರೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು, ದೆಹಲಿಯ(ಕೇಂದ್ರ ಸರ್ಕಾರ) ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಹಿಂಸಾಚಾರದ ಘಟನೆಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ. ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಟ್ವಿಟ್ ಮಾಡಿರುವ ಅವರು, ಮರಾಠಿ ಜನರು ಮತ್ತು ಮಹಾರಾಷ್ಟ್ರದ ವಾಹನಗಳ ಮೇಲೆ ದೆಹಲಿಯ ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ದಾಳಿ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ್ದಾರೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅದರ ಬೆನ್ನೆಲುಬನ್ನು ಮುರಿಯಲು ಹಾಗೂ ಮರಾಠಿ ಸ್ವಾಭಿಮಾನ ಕೊನೆಗಾಣಿಸುವ ಆಟ ಆರಂಭಿಸಲಾಗಿದೆ. ಬೆಳಗಾವಿಯಲ್ಲಿ ಮರಾಠಿಗರ ಮೇಲೆ ನಡೆದ ದಾಳಿಯ ಹಿಂದೆ ಈ ಸಂಚು ನಡೆದಿದೆ ಎಂದು ಅವರು ದೂರಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಧೈರ್ಯವಿದ್ದರೆ ವಿವಾದಿತ ಗಡಿ ಪ್ರದೇಶಗಳನ್ನು ಈ ಕೂಡಲೇ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಅವರು ಆಗ್ರಹಿಸಿದ್ದಾರೆ.

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ನೇತೃತ್ವದಲ್ಲಿ ಮಹಾರಾಷ್ಟ್ರದ ಜನರು ಬೆಳಗಾವಿಗೆ ಹೋಗಲು ಸಿದ್ದರಾಗಿದ್ದಾರೆ. ಈ ಮೂಲಕ ಬೆಳಗಾವಿಯಲ್ಲಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರಿಗೆ ವಿಶ್ವಾಸ ತುಂಬಲು ಅವರು ಬೆಳಗಾವಿಗೆ ಭೇಟಿ ನೀಡಲು ತಯಾರಿದ್ದಾರೆ ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಇಂತಹ ದಾಳಿಗಳನ್ನು ಎದುರಿಸಲು ರಾಜ್ಯ ಸರಕಾರ ದುರ್ಬಲವಾಗಿದೆ ಎಂದು ಜರಿದಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಗಳು ಸೋಲಾಪುರ ಮತ್ತು ಸಾಂಗ್ಲಿಯಲ್ಲಿ ಹಕ್ಕು ಸಾಧಿಸಿ ಮಹಾರಾಷ್ಟ್ರವನ್ನು ಆಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಜಯ ರಾವತ್ ಗಂಭೀರ ಆರೋಪ ಮಾಡಿದ್ದಾರೆ.


Jana Jeevala
the authorJana Jeevala

Leave a Reply