ಬೆಳಗಾವಿ: ನಗರದಲ್ಲಿ ವ್ಯಕ್ತಿಯೊಬ್ಬನ ಭೀಕರ ಕೊಲೆಯಾಗಿದೆ. ಪ್ರಕರಣ ಸಂಬಂಧ ಮೃತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ರಾಮತೀರ್ಥ ನಗರದಲ್ಲಿ ಈ ಘಟನೆ ನಡೆದಿದೆ. ಚಿಕ್ಕೋಡಿ ತಾಲೂಕಿನ ಅಮಿತ್ ರಾಯಬಾಗ ಕೊಲೆಯಾದ ವ್ಯಕ್ತಿ. ಇವರು ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ (9 ವರ್ಷ ಮತ್ತು 7 ವರ್ಷ) ರಾಮತೀರ್ಥ ನಗರದಲ್ಲಿ ವಾಸವಾಗಿದ್ದರು.
ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಪತಿಯ ಕತ್ತು ಬಿಗಿದು ಕೊಲೆ ಮಾಡಲಾಗಿದೆ. ಪತಿ ಕುಡಿದು ಗಲಾಟೆ ಮಾಡುತ್ತಿದ್ದುದರಿಂದ ಪತ್ನಿಯೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಹಿಂದೆ ಆತನ ವಿರುದ್ಧ ಪತ್ನಿ ಪೊಲೀಸರಿಗೆ ದೂರು ನೀಡಿದ್ದಳೆನ್ನಲಾಗಿದೆ.