ಜನಜೀವಾಳ ಜಾಲ
ಬೆಳಗಾವಿ: ಸೋಮವಾರ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ (ಮೇಲಾಟಗಳ )ಸ್ಪರ್ಧೆಗಳಲ್ಲಿ ಜಿ.ಎ.ಪ್ರೌಢಶಾಲೆಯ ಕ್ರೀಡಾಪಟುಗಳು ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಕ್ಷಿ ನಾರ್ವೆಕರ್ ಉದ್ದ ಜಿಗತದಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಈ ಎರಡು ಸ್ಪರ್ಧೆಗಳಿಂದ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಗೌರಿ ಪೂಜಾರಿ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಯಲ್ಲವ್ವ ಬಾನಸೆ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿಶಾಲ ರಾಥೋಡ ಬಲ್ಲೆ ಎಸೆತದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಜಮಟ್ಟಕ್ಕೆ ಆಯ್ಕೆಯಾದ ಈ ನಾಲ್ಕು ಕ್ರೀಡಾಪಟುಗಳಿಗೆ ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿ, ಆಜೀವ ಸದಸ್ಯ ಮಹಾದೇವ ಬಳಿಗಾರ, ಉಪ ಪ್ರಾಚಾರ್ಯ ಸಿ.ಪಿ.ದೇವರುಷಿ, ದೈಹಿಕ ಶಿಕ್ಷಕರಾದ ಎಚ್.ಜಿ.ವೀರಗಂಟಿ, ಅಕ್ಷಯ ಬಾಯನ್ನವರ, ಕ್ರೀಡಾ ವಿಭಾಗದ ಸದಸ್ಯ ಶಿವರಾಯ ಏಳುಕೋಟಿ ಶಾಲಾ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟಕ್ಕೆ ಬೆಳಗಾವಿ ಜಿಎ ಹೈಸ್ಕೂಲ್ ವಿದ್ಯಾರ್ಥಿಗಳು ಆಯ್ಕೆ


