ಬೆಳಗಾವಿ :
ಕೆಎಲ್ಇ ಸಂಸ್ಥೆಯ ಜಿ.ಎ.ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪಿ.ಯು.ಸಿ.ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಯಕ್ಕುಂಡಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ವೈ.ಎ.ಯಾಕೊಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬಂದು ದೇಶದ ಸಂಸ್ಕೃತಿಯನ್ನು ಸುಂದರಗೊಳಿಸಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಆರ್.ಎಸ್.ಪಾಟೀಲ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವವನ್ನು ತಿಳಿಸುತ್ತ ಮುಂಬರುವ ಪರೀಕ್ಷೆಗಳಿಗೆ ಶುಭ ಹಾರೈಸಿದರು.
ಯಶೋಧಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶ್ರೀದೇವಿ ಗಂಗಾಪುರ ಸ್ವಾಗತಿಸಿದರು. ಟಿ.ಪಿ.ಬಾನಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್.ಎಸ್.ಮಹಿಮಗೋಳ ವರದಿ ಓದಿದರು. ಶಿಲ್ಪಾ ದೇವಲಾಪೂರ ವಂದಿಸಿದರು. ಉಪನ್ಯಾಸಕ ಎಸ್.ಎನ್.ಮಡಿವಾಳರ ಹಾಗೂ ಶೃತಿ ನೀರಲಗಿಹಿರೇಮಠ ನಿರೂಪಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.