This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಬೆಳಗಾವಿಗೆ ತಂಪೆರೆದ ಮಳೆ : ಇನ್ನೂ ಮಳೆ ನಿರೀಕ್ಷೆ


 

ಬೆಳಗಾವಿ :
ಕೆಲ ದಿನಗಳಿಂದ ಬಿಡುವು ನೀಡಿದ್ದ ವರುಣ ಇಂದು ತಂಪೆರೆದಿದ್ದಾನೆ.ಇನ್ನೂ ಕೆಲ ದಿನಗಳ ಕಾಲ ಬೆಳಗಾವಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ವರದಿಗಳ ಪ್ರಕಾರ ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇನ್ನೂ 3-4 ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅಕ್ಟೋಬರ್‌ 2ರ ವರೆಗೂ ಮಳೆಯಾಗಬಹುದು. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.


Jana Jeevala
the authorJana Jeevala

Leave a Reply