ಬೆಳಗಾವಿ: ಗೋಕಾಕ ಗ್ರೇಡ್ 2 ತಹಶೀಲ್ದಾರ್ ಶ್ರೀಕಾಂತ್ ಬೆಟಗೇರಿ ಹಾಗೂ RI ಶಿವಾನಂದ ಹಿರೇಮಠ ಸೇರಿದಂತೆ ಹಲವು ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ ನಡೆದಿದೆ.
ಲೋಕಾಯುಕ್ತ SP ಹನುಮಂತರಾಯ ಅವರ ಮಾರ್ಗದರ್ಶನದಲ್ಲಿ ಮತ್ತು ಲೋಕಾಯುಕ್ತ DySP ಬಿ. ಎಸ್. ಪಾಟೀಲ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ದಾಖಲೆಗಳಿಗಾಗಿ ಶೋಧ ಕಾರ್ಯವನ್ನು ನಡೆಸಿದ್ದಾರೆ.
ಅಕ್ರಮವಾಗಿ SSY ಪಿಂಚಣಿಗಳ ಮಂಜೂರಾತಿ ನೀಡಿದ ಹಿನ್ನಲೆಯಲ್ಲಿ ಈ ವಿಚಾರಣೆ ನಡೆದಿದೆ ಎಂದು ಹೇಳಲಾಗುತ್ತಿದೆ.