ರಾಜ್ಯಸಭೆಯ ಮಾಜಿ ಸದಸ್ಯ ಮತ್ತು ಕೆಎಲ್ ಐ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಸಮಾರಂಭ ಅಕ್ಟೋಬರ್ 15 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕೇಂದ್ರದ ಶಿಕ್ಷಣ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಅತಿಥಿಯಾಗಿ ಆಗಮಿಸುವರು. ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಉಪಸ್ಥಿತರಿರುವರು.
ಬೆಳಗಾವಿ :
ಕೆಎಲ್ ಐ ಸಂಸ್ಥೆಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಆಚರಣೆಗೆ ಬೆಳಗಾವಿ ಸಜ್ಜಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಪ್ರಕಟಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಪ್ರಭಾಕರ ಕೋರೆ ಅವರು ತಮ್ಮ ಇಡೀ ಜೀವಮಾನವನ್ನು ಸಮಾಜಸೇವೆಗೆ ಮೀಸಲಿಟ್ಟಿದ್ದಾರೆ. ಈ ಪ್ರಭಾಕರ ಕೋರೆ ಅವರಿಗೆ ಅಭಿನಂದನೆ ಸಲ್ಲಿಸಲು ಅವರ ಹುಟ್ಟುಹಬ್ಬದ ಅಮೃತ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.
ವಿಶ್ವ ಭೂಪಟದಲ್ಲಿ ಬೆಳಗಾವಿ ಎಲ್ಲಿದೆ ಎಂದು ತೋರಿಸುತ್ತದೆ. ಪ್ರಭಾಕರ ಕೋರೆ ಕೊಡುಗೆ ಬಹಳಷ್ಟಿದೆ. ಬೆಳಗಾವಿಗಾಗಿ ಅವರು ಅಹರ್ನಿಶಿ ಶ್ರಮಿಸಿದ್ದರು. ಡಾ.ಪ್ರಭಾಕರ ಕೋರೆ ಅವರ ಹುಟ್ಟುಹಬ್ಬದ ಆಚರಣೆಗೆ ಕರ್ನಾಟಕ. ನೆರೆಯ ಮಹಾರಾಷ್ಟ್ರ, ಗೋವಾದಿಂದ ಪ್ರತಿಷ್ಠಿತ ಗಣ್ಯಮಾನ್ಯರು ಆಗಮಿಸಲಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕು ಎಂದು ಅವರು ಮನವಿ ಮಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಪಕ್ಷಾತೀತ ಕಾರ್ಯಕ್ರಮ ನಡೆಯುತ್ತಿದೆ. ಒಂದು ಲಕ್ಷ ಜನ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ. ಅಷ್ಟು ಜನರಿಗೆ ಊಟದ ವ್ಯವಸ್ಥೆ ಸೇರಿದಂತೆ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಶಿಕ್ಷಣ, ರಾಜಕೀಯ, ಕೃಷಿ ಎಲ್ಲ ರಂಗದಲ್ಲೂ ಡಾ. ಪ್ರಭಾಕರ ಕೋರೆ ಅದ್ವಿತೀಯ ಕೊಡುಗೆ. ಅವರ ಅಮೃತ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಪ್ರಯುಕ್ತ ವರ್ಷವಿಡೀ ಕಾರ್ಯಕ್ರಮ :
ಡಾ. ಪ್ರಭಾಕರ ಕೋರೆ ಅವರ 75 ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಅಮೃತ ಮಹೋತ್ಸವ ನಡೆಯಲಿದೆ. ಈ ನಿಮಿತ್ತ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು ನವೆಂಬರ್ 11 ರಂದು ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದಲ್ಲಿ ಮಠಾಧೀಶರ ಸಮಾವೇಶ ಆಯೋಜಿಸಲಾಗಿದೆ. ಮುಂದಿನ ವರ್ಷದ ಜನವರಿಯಲ್ಲಿ ಚಿದಾನಂದ ಪ್ರಭು ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೃಷಿ ಮೇಳ ಏರ್ಪಡಿಸಲಾಗುತ್ತಿದೆ.
ಜತೆಗೆ ಇನ್ನೂ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪ್ರಭಾಕರ ಕೋರೆ ಅವರ ಜನ್ಮದಿನವನ್ನು ಅರ್ಥಪೂರ್ಣವನ್ನಾಗಿಸಲು
ಯೋಜಿಸಲಾಗಿದೆ.
ಊಟದ ವ್ಯವಸ್ಥೆ :
ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವಕ್ಕೆ ಆಗಮಿಸುವವರಿಗೆ ಚಿಕ್ಕೋಡಿ ಭಾಗದವರೆಗೆ ಭೂತರಾಮನಹಟ್ಟಿ ಮುಕ್ತಿಮಠ, ಗೋಕಾಕ ಕಡೆಯಿಂದ ಬರುವವರಿಗೆ ಕಣಬರ್ಗಿಯ ಸಂಕಲ್ಪ ಗಾರ್ಡನ್, ಬೈಲಹೊಂಗಲ ಕಡೆಯಿಂದ ಬರುವವರಿಗೆ ನಿಲಜಿ ಗಜಾನನ ಗಾರ್ಡನ್, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಕಿತ್ತೂರು ಭಾಗದಿಂದ ಬರುವವರಿಗೆ ಧರ್ಮನಾಥ ಭವನ, ಬೆಳಗಾವಿ ಗ್ರಾಮೀಣ, ನಗರ ಹಾಗೂ ಖಾನಾಪುರದಿಂದ ಬರುವವರಿಗೆ ನಾಗನೂರು ರುದ್ರಾಕ್ಷಿ ಮಠದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿದೆ.
ಶಾಸಕ ಮಹಾಂತೇಶ ದೊಡಗೌಡರ, ನ್ಯಾಯವಾದಿ ಹಾಗೂ ಬಿಜೆಪಿ ವಕ್ತಾರ ಎಂ.ಬಿ.ಜಿರಲಿ, ಆಜೀವ ಸದಸ್ಯರಾದ ಡಾ. ಸುನಿಲ ಜಲಾಲಪುರೆ, ಡಾ. ಶಿವಯೋಗಿ ಹೂಗಾರ ಪತ್ರಿಕಾಗೋಷ್ಠಿಯಲ್ಲಿದ್ದರು. ಆಜೀವ ಸದಸ್ಯ ಮಹಾದೇವ ಬಳಿಗಾರ ಸ್ವಾಗತಿಸಿದರು.