ಬೆಂಗಳೂರು :ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾರು ಗೆಲುವು ಪಡೆಯುತ್ತಾರೆ ಎಂಬ ಬಗ್ಗೆ ಇದೀಗ ರಾಜ್ಯಾದ್ಯಂತ ಬೆಟ್ಟಿಂಗ್ ಬಲು ಜೋರಾಗಿ ನಡೆದಿದೆ.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪರ್ಧಿಸಿರುವ ವರುಣಾ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪರ್ಧಿಸಿರುವ ಅಥಣಿ,
ಬಿಜೆಪಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದಿಂದ ಸ್ಪರ್ಧೆಗಳಿದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ಟಿಕೆಟ್ ವಂಚಿತರಾಗಿ ಪುತ್ತೂರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಅರುಣ ಪುತ್ತಿಲ್ಲ, ಪ್ರಿಯಾಂಕಾ ಖರ್ಗೆ ಸ್ಪರ್ಧಿಸಿರುವ ಚಿತ್ತಾಪುರ ಎಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿಯವರಲ್ಲಿ ಯಾರು ಮುಖ್ಯಮಂತ್ರಿ ಆಗಬಹುದು ? ಯಾವ ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿ ಆಗಬಹುದು ಎಂಬ ಚರ್ಚೆಯೂ ಸಹಾ ಜೋರಾಗಿ ನಡೆದಿದೆ.