ಖಾನಾಪುರ : ತಾಲೂಕಿನ ವರ್ಕಡ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಸೇತುವೆ ನಿರ್ಮಾಣ (ಬಿರುಜ್ ಬಾಂಧ್) ಕಾಮಗಾರಿಗೆ ಗುರುವಾರ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿತು.
ಖಾನಾಪುರ ಕ್ಷೇತ್ರದ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರ ಅಧ್ಯಕ್ಷತೆಯಲ್ಲಿಯೇ ಪೂಜಾ ಕಾರ್ಯಕ್ರಮ ನಡೆಯಿತು.
ಈ ಕಾಮಗಾರಿಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಜಿಲ್ಲಾ ಪಂಚಾಯತ್ ಬೆಳಗಾವಿ) ಯ ಅಡಿಯಲ್ಲಿ ಕೈಗೊಳ್ಳಲಾಗಿದ್ದು,
ಒಟ್ಟು ವೆಚ್ಚ ₹50 ಲಕ್ಷ (ಎಸ್ ಡಿಎಂಎಫ್ ನಿಧಿಯಿಂದ) ನಿಗದಿಯಾಗಿದೆ.
ಈ ಕಾಮಗಾರಿಯಿಂದ ವರ್ಕಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆಗೆ ಉತ್ತಮ ರಸ್ತೆ ಸೌಲಭ್ಯ ಲಭ್ಯವಾಗಲಿದ್ದು, ಸಂಚಾರ ಸುಗಮವಾಗಲಿದೆ ಎಂದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಂಡಿ ಸದಾನಂದ ಪಾಟೀಲ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಮಾರಿಹಾಳ, ಮೀಡಿಯಾ ಪ್ರಮುಖ ಸಿದ್ದಪ್ಪ ಪಾಟೀಲ,
ಗುತ್ತಿಗೆದಾರ ಅಡಿವೆಪ್ಪ ಕರನ್ನವರ, ಗ್ರಾಮ ಪಂಚಾಯತ್ ಸದಸ್ಯ ವಿನಯ ದೇಸಾಯಿ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.


