ಬೆಳಗಾವಿ: ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಗುರುವಾರ (ಜುಲೈ 25 ರಂದು) ಮತ್ತು ಶುಕ್ರವಾರ ಜುಲೈ 26 ಬೆಳಗಾವಿ ಜಿಲ್ಲೆಯ ಕೆಲ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಪಶ್ಚಿಮ ಘಟ್ಟದ ಅಂಚಿನಲ್ಲಿರುವ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಜೆ ಘೋಷಣೆಯಾದ ತಾಲೂಕುಗಳು :
ವ್ಯಾಪಕ ಮಳೆ: ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೀಷನ್ ಆದೇಶ ಹೊರಡಿಸಿದರು.