ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆದಿದೆ. ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ವಾದವನ್ನು ಆಲಿಸಿರುವ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.