ಬೆಳಗಾವಿ :
ರಾಮದುರ್ಗ ವಿಧಾನ ಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತಗೊಂಡ
ಚಿಕ್ಕರೇವಣ್ಣ ಕೊನೆಗೂ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
‘ಯಾವುದೇ ಷರತ್ತು ವಿಧಿಸದೆ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಚಿಕ್ಕ ರೇವಣ್ಣ ಅವರು ಸ್ಪಷ್ಟಪಡಿಸಿದ್ದಾರೆ’.
ಕುರುಬ ಸಮಾಜಕ್ಕೆ ಸೇರಿರುವ ಇವರು ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಚಿಕ್ಕರೇವಣ್ಣ ಅವರ ಬೆಂಬಲಿಗರು ಇತ್ತೀಚಿಗೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಒತ್ತಾಯಿಸಿದ್ದರು.
ಆದರೆ, ಹಿರಿಯ ನಾಯಕ ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಮುಂದಾಗಿರುವುದರಿಂದ ಚಿಕ್ಕರೇವಣ್ಣ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.