ಬೆಳಗಾವಿ : ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ರವಿ ನಿಂಗಪ್ಪ ಬೂದಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಬೈಕ್ ಹಿಂಬದಿ ಸವಾರಿನಿಗೆ ತಲೆಗೆ ಪೆಟ್ಟು ಬಿದ್ದಿದ್ದು, ರಾಮದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ರಾಮದುರ್ಗ ಪಿಎಸ್ಐ ಸವಿತಾ ಮುನ್ಯಾಳ ಭೇಟಿ ನೀಡಿ ಪರಿಶೀಲನೆ ಮಾಡಿದರು.