ಬೆಂಗಳೂರು :
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇದೀಗ ಮುಗಿಯುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಚಾಣಕ್ಯ ಎಂದೇ ಖ್ಯಾತರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಏಪ್ರಿಲ್ 21 ಮತ್ತು 22 ರಂದು ಅಮಿತ್ ಷಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಚುನಾವಣೆ ಪ್ರಚಾರದಲ್ಲಿ ಅವರು ಭಾಗಿಯಾಗಲಿದ್ದು ನಾಡಿನ ಹಲವು ಖ್ಯಾತ ಮಠಾಧೀಶರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಾಜ್ಯದ ಬಿಜೆಪಿ ನಾಯಕರ ಜತೆಗೆ ಸಭೆ ನಡೆಸಿ ಪ್ರಚಾರದ ಕಾರ್ಯತಂತ್ರ ರೂಪಿಸಲಿದ್ದಾರೆ. ಏಪ್ರಿಲ್ 21 ಮತ್ತು 22 ರಂದು ದಾವಣಗೆರೆ ಹಾಗೂ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರು ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ನಂತರ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 25 ರ ಬಳಿಕ ಕರ್ನಾಟಕ ವಿಧಾನಸಭಾ ಚುನಾವಣೆಯ ರಂಗು ಹೆಚ್ಚಿಸಲಿಸಲಿದ್ದಾರೆ. ರಾಜ್ಯದಲ್ಲಿ ಸುಮಾರು 15 ರಿಂದ 20 ರೋಡ್ ಶೋ ಹಾಗೂ ಸಮಾವೇಶಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.