ಬೆಳಗಾವಿ : ಬಿಜೆಪಿ ಕೋರ್ ಕಮಿಟಿ ಸಭೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಿಗದಿಯಾಗಿದೆ. ನಡ್ಡಾ ಅವರು ಬೆಳಗ್ಗೆ ಚಿಕ್ಕೋಡಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ ಬೆಳಗಾವಿಗೆ ಆಗಮಿಸಿ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ. ಸಂಜೆ ಜೀರಗೆ ಸಭಾಭವನದಲ್ಲಿ ಪ್ರಭುದ್ಧರ ಸಭೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿಯ ನಾಯಕರು ಇಂದಿನ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದ್ದಾರೆ.

 
             
         
         
        
 
  
        
 
    