ಬೆಳಗಾವಿ : ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಚಕ್ಕಡಿ ಹಾಗೂ ಟ್ರ್ಯಾಕ್ಟರ್ ರ್ಯಾಲಿ ಮೂಲಕ ತೆರಳಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೈತರು (ಬಾರುಕೋಲು ಹೆಗಲಿಗೆ ಹಾಕಿಕೊಂಡು) ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ),
ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ,ಡಾ. ವಿಶ್ವನಾಥ ಪಾಟೀಲ, ಮುಖಂಡರಾದ ಎಂ.ಬಿ.ಜಿರಲಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ ಬೂದಿಹಾಳ, ಕಲ್ಲಪ್ಪ ಶಹಾಪುರಕರ, ರಾಜಕುಮಾರ ಹರಗಾಪುರ ಹಾಗೂ ಮುಖಂಡರು, ರೈತರು, ಪ್ರಮುಖ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.