ದೆಹಲಿ : ಲೋಕಸಭೆ ಚುನಾವಣೆಗೆ ವಾರದ ಹಿಂದೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ, ಮಾ.10, ರವಿವಾರ 150 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.
ಬಹುತೇಕ ಹಾಲಿ ಸಂಸದರಿಗೆ ಈ ಪಟ್ಟಿಯಲ್ಲಿ ಮತ್ತೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಹಾಲಿ ಸಂಸದರ ಹೆಸರು ಬಹುತೇಕ ಹೊರಬರುವ ಸಾಧ್ಯತೆ ದಟ್ಟವಾಗಿದೆ.
ಈ ಪಟ್ಟಿಯಲ್ಲಿ ಮಹಾರಾಷ್ಟ್ರ ಮತ್ತು ಬಿಹಾರದ ಹೆಚ್ಚಿನ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ.
ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಹಿಮಾಚಲ ಪ್ರದೇಶ, ಹರಿಯಾಣ, ಒಡಿಶಾ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ನಿರೀಕ್ಷೆಯಿದೆ.
ರವಿವಾರ ಬಿಜೆಪಿಯ ಸಿಇಸಿ ಸಭೆ ನಡೆಯಲಿದೆ. ಬುಧವಾರದಿಂದಲೇ ಈ ಎಲ್ಲ ರಾಜ್ಯಗಳ ಅಭ್ಯರ್ಥಿಗಳ ಸಂಬಂಧ ಚರ್ಚೆ ನಡೆಸಲಾಗಿದೆ. ಹೈಕಮಾಂಡ್ ರಾಜಸ್ಥಾನ, ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕ, ಒಡಿಶಾ ಘಟಕಗಳ ಕೋರ್ ಕಮಿಟಿ ಜತೆಗೆ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿ ಪಟ್ಟಿ ಸಿದ್ಧಪಡಿಸಲಾಗಿದೆ.