ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ 2ನೇ ದಿನವಾದ ಮಂಗಳವಾರ ರಾಜ್ಯ ಸರ್ಕಾರದ ವೈಫಲ್ಯ 2, ರೈತ ವಿರೋಧಿ ನೀತಿ ವಿರೋಧಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಲಿದೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಆರ್.ಅಶೋಕ್, ಈ ಬಗ್ಗೆ ಮಾಹಿತಿ ನೀಡಿ, ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಿಂದ ಸುವರ್ಣ ಸೌಧದ ವರೆಗೆ ಮೆರವಣಿಗೆ ಸಾಗಲಿದೆ.


