ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅವಧಿಯನ್ನು ವಿಸ್ತರಿಸಲಾಗಿದೆ. ಇನ್ನೂ ಒಂದು ವರ್ಷ ಅಧ್ಯಕ್ಷರಾಗಿ ನಡ್ಡಾ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ . 2024 ರ ಲೋಕಸಭಾ ಚುನಾವಣೆ ನಡ್ಡಾ ಅಧ್ಯಕ್ಷತೆಯಲ್ಲೇ ಎದುರಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೆಹಲಿ :
ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪಕ್ಷದ ಅಧ್ಯಕ್ಷೀಯ ಸ್ಥಾನದ ಅವಧಿ ವಿಸ್ತರಣೆಯಾಗಿದ್ದು , ಜೂನ್ 2024 ರವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ.
ದೆಹಲಿಯ ಎರಡು ದಿನಗಳ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಚರ್ಚೆ ಮಾಡಲಾಗಿದೆ. ಜೊತೆಗೆ ಮುಂಬರುವ ಚುನಾವಣೆಗಳ ಸಿದ್ಧತೆಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ , ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ , ಕೇಂದ್ರ ಗೃಹ ಸಚಿವ ಅಮಿತ್ ಶಾ , ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ , ನಿತಿನ್ ಗಡ್ಕರಿ , ಸಿಎಂ ಬಸವರಾಜ ಬೊಮ್ಮಾಯಿ , ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ , ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿ ಹಲವರು ಉಪಸ್ಥಿತರಿದ್ದರು .
ಇದೀಗ ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರ ಜೂನ್ವರೆಗೆ ಅಧ್ಯಕ್ಷ ಜೆ.ಪಿ.ನಡ್ಡಾ ಅವಧಿ ವಿಸ್ತರಣೆ ಮಾಡಲಾಗಿದ್ದು , ನಡ್ಡಾ ನೇತೃತ್ವದಲ್ಲೇ 2024 ರ ಲೋಕಸಭಾ ಚುನಾವಣೆ ಎದುರಿಸುತ್ತೇವೆ . ಈ ಮೂಲಕ ನಡ್ಡಾ ನೇತೃತ್ವದಲ್ಲಿ ಪಕ್ಷ ಸಂಘಟನೆ ಬಲವರ್ಧನೆಯಾಗಿದೆ ಎಂದು ಹೇಳಿದ್ದಾರೆ . ನಡ್ಡಾ ನೇತೃತ್ವದಲ್ಲಿ ಹಲವು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ . 2019 ರ ಚುನಾವಣೆಯಲ್ಲಿ ಗೆದ್ದ ಸ್ಥಾನಕ್ಕಿಂತ ಹೆಚ್ಚು ಗೆಲ್ಲುತ್ತೇವೆ ಎಂಬ ಭರವಸೆ ಇದೆ ಎಂದು ಹೇಳಲಾಗಿದೆ . 2024 ರ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ , ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ .