ಬೆಂಗಳೂರು: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ
ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ.
ಈ ಹಿಂದೆ ಚಕ್ರವರ್ತಿ ಸೂಲಿಬೆಲೆಯವರು ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಕಾಲಕ್ಕೆ ಬಿಜೆಪಿ ಪರವಾಗಿ ಇಡೀ ರಾಜ್ಯಾದ್ಯಂತ ಸುದ್ದಿ ಯುವಕರನ್ನು ಸಂಘಟಿಸಿದವರು. ಜನರನ್ನು ಸೆಳೆಯುವ ಸಾಮರ್ಥ್ಯ ಹೊಂದಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ಹಿಂದೆಯೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಈ ಬಾರಿ ಅವರಿಗೆ ಬಹುತೇಕ ಟಿಕೆಟ್ ನೀಡಬಹುದು ಎಂಬ ವಾತಾವರಣ ಕಂಡುಬಂದಿದೆ.
ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ, ಸಂಘ ಪ್ರಚಾರಕ ಗೋಪಾಲ್ ಜಿ ಸೇರಿದಂತೆ ಇನ್ನು ಕೆಲವರ ಹೆಸರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕೇಳಿ ಬರುತ್ತಿದ್ದು ಈ ನಡುವೆ ಚಕ್ರವರ್ತಿ ಸೂಲಿಬೆಲೆ ಅವರಿಗೆ ನೀಡಿದರೆ ಟಿಕೆಟ್ ದೊರೆತರೂ ಅಚ್ಚರಿ ಪಡಬೇಕಾಗಿಲ್ಲ.