ಖಾನಾಪುರ : ರಾಜಸ್ಥಾನದ ಮೌಂಟ್ ಅಬು ಸಮೀಪದ ಶಾಂತಿವನ ಕ್ಯಾಂಪಸ್ನಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ‘ಏಕತೆ ಮತ್ತು ವಿಶ್ವಾಸ ಕುರಿತ ಜಾಗತಿಕ ಶೃಂಗಸಭೆಯಲ್ಲಿ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರು ಭಾಗವಹಿಸಿ ಸನ್ಮಾನ ಸ್ವೀಕರಿಸಿದರು.
ಸುಸ್ಥಿರ ಭವಿಷ್ಯವನ್ನು ಪ್ರೇರೇಪಿಸುವ ಗುರಿಯೊಂದಿಗೆ ಆಯೋಜಿಸಲಾಗಿದ್ದ
ಈ ಬೃಹತ್ ಅಂತರರಾಷ್ಟ್ರೀಯ ಶೃಂಗಸಭೆಯಲ್ಲಿ ಜಾಗತಿಕ ನಾಯಕರು, ನೀತಿ ನಿರೂಪಕರು, ಪರಿಸರವಾದಿಗಳು, ಶಿಕ್ಷಣ ತಜ್ಞರು ಮತ್ತು ಆಧ್ಯಾತ್ಮಿಕ ದಾರ್ಶನಿಕರು ಸೇರಿದಂತೆ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದಾರೆ. ಕ್ಷಿಪ್ರವಾಗಿ ಬದಲಾಗುತ್ತಿರುವ ಜಗತ್ತಿನ ಸವಾಲುಗಳಿಗೆ ಆಧ್ಯಾತ್ಮಿಕ ಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ.
ಬ್ರಹ್ಮಕುಮಾರೀಸ್ ಜಾಗತಿಕ ಶೃಂಗಸಭೆಯಲ್ಲಿ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರಿಗೆ ಸನ್ಮಾನ
