ಬೆಳಗಾವಿ :
ಸಮಾಜದಲ್ಲಿನ ಜಾತಿ, ಬೇದ ಭಾವ ತೆರವುಗೊಳಿಸಿ, ಜನ ಸಾಮಾನ್ಯರ ಬದುಕಿನಲ್ಲಿ ಅಡಗಿರುವಂತಹ ದುಃಖ ದುಮ್ಮಾನಗಳನ್ನು ಹೋಗಲಾಡಿಸಿ ಉತ್ತಮ ಜೀವನ ಕಟ್ಟಿಕೊಟ್ಟ ಕೀರ್ತಿ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸಲ್ಲುತ್ತದೆ ಎಂದು ಲಿಂಗರಾಜ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಡಾ. ರೇಣುಕಾ ಕಠಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಗುರುವಾರ (ಆ.31) ಏರ್ಪಡಿಸಲಾಗಿದ್ದ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯಲ್ಲಿ ಮಾತನಾಡಿದರು.
ದೇವರ ನಾಡು ಎಂದು ಕರೆಸಿಕೊಂಡ ಕೇರಳ ರಾಜ್ಯದಲ್ಲಿ ಜಾತಿ ಜಾತಿಗಳೆಂದು ದ್ವೇಷ, ಅಸೂಹೆ, ಕ್ರೌರ್ಯ, ದೌರ್ಜನ್ಯ ತಾಂಡವಾಡುತ್ತಿರುವಂತಹ ಸಂದರ್ಭದಲ್ಲಿ ಜಾತಿಯ ಅಂಧಕಾರವನ್ನು ಕಟ್ಟಿ ಹಾಕಿ ಸಮಾನತೆಯನ್ನು ತಂದವರು ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳು.
ಆಧುನಿಕ ಕಾಲದಲ್ಲಿಯೂ ಕೆಲವೆಡೆ ಜಾತಿ ಎಂಬ ಅನಿಷ್ಟ ಪದ್ಧತಿ ಇನ್ನೂ ಮುಂದುವರಿಯತ್ತಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರೇರಣೆಯಾಗಿ ಯುವ ಪೀಳಿಗೆ ಶಿಕ್ಷಣದ ಜೊತೆಗೆ ಸಮಾನತೆ, ಮಾನವೀಯತೆ ಗುಣಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಸಮಾನತೆ ಸಾಧ್ಯ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಬಲ್ಲವ ಸಂಘದ ಕಾರ್ಯದರ್ಶಿ ಸುಜನ್ ಕುಮಾರ, ಬಿಲ್ಲವ ಸಂಘದ ಉಪಾಧ್ಯಕ್ಷ ಸಂತೋಷ ಪೂಜಾರಿ, ಸುಂದರ್ ಎಸ್. ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.