ಬೆಳಗಾವಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಉತ್ಸವ ಜರುಗಲಿದೆ. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಶಾಸಕ ಆಸೀಫ್ (ರಾಜು) ಸೇಠ್ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ರವಿ ಕೋಟಾಗಸ್ತಿ ಅವರು ವಿಶೇಷ ಉಪನ್ಯಾಸ ಮಾಡಲಿದ್ದಾರೆ. ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ-2 ನವದೆಹಲಿ ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷ ಭರಮಗೌಡ ಕಾಗೆ ಮತ್ತು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ವಿಶೇಷ ಆಮಂತ್ರಿತರಾಗಿ ಆಗಮಿಸಲಿದ್ದಾರೆ. ರಾಜ್ಯ ಸಭೆ ಸಂಸದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿ ಸಂಸದ ಜಗದೀಶ ಶೆಟ್ಟರ, ಉತ್ತರ ಕನ್ನಡ ಲೋಕ ಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜನಪ್ರತಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.